ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್ ಹಳೆಯಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಆನೆಗುಂದಿ ಸರಸ್ವತಿ ಪೀಠ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಕ್ರೀಡಾಪಟುಗಳ ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು. ಪಡುಕುತ್ಯಾರು ಆನೆಗುಂದಿ ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಂಬಾರು ಕ್ರೀಡಾ ಧ್ವಜಾವರೋಹಣಗೈದು ಶುಭ ಹಾರೈಸಿದರು.
ಕಾಪು ವಲಯದ ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ ಪ್ರಸ್ತಾವನೆಗೈದರು.
ಅಸ್ಸೆಟ್ ಉಪಾಧ್ಯಕ್ಷ ವಿವೇಕ ಆಚಾರ್ಯ ಶಿರ್ವ, ಗುರುಸೇವಾ ಪರಿಷತ್ ಅಧ್ಯಕ್ಷ ಗಣೇಶ ಆಚಾರ್ಯ ಕೆಮ್ಮಣ್ಣು, ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ, ಸಿ. ಆರ್. ಪಿ ಸರಿತಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ತಂತ್ರಿ,ಮಾತೃ ಮಂಡಳಿ ಅಧ್ಯಕ್ಷೆ ಶೋಭಾ ಆಚಾರ್ಯ,ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ವೇದಿಕೆಯಲ್ಲಿದ್ದರು.
ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ, ನಿಕಟಪೂರ್ವ ಅಧ್ಯಕ್ಷೆ ಲತಾ ಆಚಾರ್ಯ, ದೈಹಿಕ ಶಿಕ್ಷಣ ಪರೀಕ್ಷಣಾಧಿಕಾರಿ ರವೀಂದ್ರ ನಾಯಕ್, ವಿಶುಕುಮಾರ್ ಆಚಾರ್ಯ ಪಡುಬಿದ್ರಿ,ದೈಹಿಕ ಶಿಕ್ಷಕರಾದ ನವೀನ್ ಶೆಟ್ಟಿ, ಸುರೇಶ್ ದೇವಾಡಿಗ, ಪ್ರಶಾಂತ್ ಆಚಾರ್ಯ, ತೀರ್ಪುಗಾರರು,ಕಾಪು ವೃತ್ತದ ದೈಹಿಕ ಶಿಕ್ಷಣ ಶಿಕ್ಷಕರು, ಸಂಸ್ಥೆಯ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲೆ ಸಂಗೀತ ರಾವ್ ಸ್ವಾಗತಿಸಿ, ಉಪಪ್ರಾಂಶುಪಾಲೆ ಸೌಮ್ಯ ವಂದಿಸಿದರು. ಶಿಕ್ಷಕ ಸುಧೀರ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕಾರ್ಯದರ್ಶಿ ಗುರುರಾಜ ಕೆ.ಜೆ ಮಾತನಾಡಿ ಪ್ರಥಮ ಬಾರಿಗೆ ಸಂಸ್ಥೆಯಲ್ಲಿ ಕ್ರೀಡಾಕೂಟವನ್ನು ಸಂಘಟಿಸಲು ಸಹಕರಿಸಿದ ಶಾಲಾ ಶಿಕ್ಷಣ ಇಲಾಖೆ ಮತ್ತು ದಾನಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು.
ಅಸ್ಸೆಟ್ ಪದಾಧಿಕಾರಿಗಳಾದ ವಿವೇಕ ಆಚಾರ್ಯ, ಜನಾರ್ದನ ಆಚಾರ್ಯ ಬಜಕೂಡ್ಲು,ಸುಂದರ ಆಚಾರ್ಯ ಮರೋಳಿ,ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ,ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವೇಣುಗೋಪಾಲ್, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ಪ್ರಾಂಶುಪಾಲೆ ಸಂಗೀತ ರಾವ್ ಸ್ವಾಗತಿಸಿ, ಶಿಕ್ಷಕಿ ರಮ್ಯ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಆಚಾರ್ಯ ವಂದಿಸಿದರು.