ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್‌ ಹಗರಣ : ಡಿಕೆಶಿ 

ತರಾತುರಿಯಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಆರೋಪ

ಬೆಂಗಳೂರು : ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲ ಇಲಾಖೆಗಳಲ್ಲಿ ತರಾತುರಿಯಿಂದ ಟೆಂಡರ್ ಕರೆಯಲಾಗುತ್ತಿದೆ. 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪಿಸಿದ್ದಾರೆ.ಡಿಕೆಶಿ ಮನೆಯಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದು ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ.

ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್ ಅಧಿವೇಶನ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, ಆರೋಗ್ಯ ಸೇರಿ ಎಲ್ಲ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿಬಿಟ್ಟಿದ್ದಾರೆ. ಬೀದಿಯಲ್ಲಿ ನಿಂತು ಅವರು ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಮಂತ್ರಿ ಮಾಡದೆ ಇರುವವರಿಗೆ 2-3 ಸಾವಿರ ಕೋಟಿ ಕೆಲಸ ಅಂತ ಟೆಂಡರ್ ಹಂಚಿಕೆ ಮಾಡುತ್ತಾ ಇದ್ದಾರೆ. ನಮಗೆ ಅದೇ ಶಾಸಕರು ಮಾಹಿತಿ ಕೊಡುತ್ತಿದ್ದಾರೆ. ಸಾವಿರಾರು ಕೋಟಿ ರೂ. ಮೊತ್ತದ ಹಳೆಯ ಕೆಲಸದ ಬಿಲ್ ಬಾಕಿ ಉಳಿದುಕೊಂಡಿದ್ದರೂ ಹೊಸ ಟೆಂಡರ್​ಗಳನ್ನು ಹಂಚಲಾಗುತ್ತಿದೆ. ಯಾರು ಮುಂಚಿತವಾಗಿ ಹಣ ತಲುಪಿಸುತ್ತಾರೋ ಅವರಿಗೆ ಕೆಲಸದ ಹಂಚಿಕೆ ಮಾಡುತ್ತಿದ್ದಾರೆ. ಯಾವುದೂ ಪಾರದರ್ಶಕವಾಗಿ ನಡೆಯುತ್ತಿಲ್ಲ.







































 
 

ಬಿಡಿಎ ಕಾರಂತ ಬಡಾವಣೆ ಇನ್ನೂ ಹಂಚಿಕೆ ಆಗಿಲ್ಲ. ಆದರೂ ಅಲ್ಲಿ 3 ಸಾವಿರ ಕೋಟಿ ರೂ. ಟೆಂಡರ್ ಕರೆದಿದ್ದಾರೆ. ಬರೀ ವಸೂಲಿಬಾಜಿ ನಡೆಯುತ್ತಿದೆ. ಬೆಂಗಳೂರಿಗೆ ಕರಪ್ಶನ್ ಕ್ಯಾಟಿಟಲ್ ಎಂಬ ಹೆಸರು ಬಂದಿದೆ. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ. ಆಗ ಎಲ್ಲವನ್ನೂ ರದ್ದು ಮಾಡುತ್ತೇವೆ. ಅಧಿಕಾರಿಗಳು, ಗುತ್ತಿಗೆದಾರರು, ರಾಜಕಾರಣಿಗಳನ್ನು ಬಿಡುವುದಿಲ್ಲ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top