3 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು

ಬೆಳಗಾವಿ : ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಈ ತೀರ್ಪು ನೀಡಿದೆ. 2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬ ಐುವಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.
ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸಿ ಆರೋಪಿ ಉದ್ದಪ್ಪ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮಗುವಿನ ಕಣ್ಣು ಮೂಗು ಮಣ್ಣಲ್ಲಿ ಹಾಕಿ ಕೊಲೆ ಮಾಡಿದ್ದ. ಈ ಪ್ರಕರಣ ಸಂಬಂಧ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top