ಪುತ್ತೂರು: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಹಮ್ಮದ್ ಇಕ್ಬಾಲ್ (53) ನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ಶನಿವಾರ ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಗೋದಾವರಿ ಜಿಲ್ಲಾ ನಿವಾಸಿ ಮಹಮ್ಮದ್ ಇಕ್ಬಾಲ್ ನ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ,ಕ್ರ 15/2008 ಕಲಂ 416, 420, 511 ಜೊತೆಗೆ 34 Ipc ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು.
ಆರೋಪಿ ಬಂಧನಕ್ಕಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ರವಿ ಬಿ.ಎಸ್, ಹಾಗೂ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ, ಎಎಸ್ ಐ ಪರಮೇಶ್ವರ್ ಕೆ, ಹೆಡ್ ಕಾನ್ ಸ್ಟೇಬಲ್ ಮಧು ಕೆ. ಎನ್., ಪೊಲೀಸ್ ಕಾನ್ ಸ್ಟೇಬಲ್ ಅಸ್ತಮಾ ಅವರುಗಳ ತಂಡ ತೆಲಂಗಾಣ ರಾಜ್ಯದ ಹೈದ್ರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.