ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನನಪ್ಪಿದ ಘಟನೆ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು ನಡೆದಿದೆ.
ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ. ಮೃತರನ್ನು ಸುರೇಶ್ ಆಚಾರ್ಯ (36) ಮೀನಾಕ್ಷಿ (32)
ಸುಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.