ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಎನ್.ಸಿ.ಸಿ. ಘಟಕಗಳಾದ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ ಘಟಕ ಮತ್ತು 5 ಕರ್ನಾಟಕ ನೌಕಾದಳ ಘಟಕಗಳ ಜಂಟಿ ಆಶ್ರಯದಲ್ಲಿ ಸ್ವಚ್ಛಹಿ ಸೇವಾ ಆಂದೋಲನದ ಅಂಗವಾಗಿ ಫಾದರ್ ಪತ್ರವೋ ವೃತ್ತದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಕಾಲೇಜಿನ ಎನ್.ಸಿ.ಸಿ. ಘಟಕದ ಸದಸ್ಯರು ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಶುದ್ಧಗೊಳಿಸಿ, ಗಿಡ ಗಂಟಿಗಳು, ಪ್ಲಾಸ್ಟಿಕ್, ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಕಾಲೇಜಿನ ಭೂದಳ ಎನ್.ಸಿ.ಸಿ. ಅಧಿಕಾರಿ ಕ್ಯಾ. ಜೋನ್ಸನ್ ಡೇವಿಡ್ ಸಿಕ್ವೇರಾ, ನೌಕಾದಳ ಘಟಕ ಎನ್.ಸಿ.ಸಿ. ಅಧಿಕಾರಿ ತೇಜಸ್ವಿ ಭಟ್ ಅವರ ಮಾರ್ಗದರ್ಶನದಲ್ಲಿ ಚಟುವಟಿಕೆಯಲ್ಲಿ ಪಾಲ್ಗೊಂಡ ಎನ್.ಸಿ.ಸಿ. ಸದಸ್ಯರು ಸ್ವಚ್ಛತೆಯ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವದ ಅರಿವು ಮೂಡಿಸಿದರು.