6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ : ನೈಜೀರಿಯ ಪ್ರಜೆ ಬಂಧನ

ಮಂಗಳೂರು ಪೊಲೀಸರು ನಡೆಸಿದ ದೊಡ್ಡ ಕಾರ್ಯಾಚರಣೆ

ಮಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ಸಿಸಿಬಿ ಪೊಲೀಸರು 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿ ಓರ್ವ ನೈಜೀರಿಯ ಪ್ರಜೆಯನ್ನು ಬಂಧಿಸಿದ್ದಾರೆ.
ಮಂಗಳೂರು ಪೊಲೀಸ್ ಇತಿಹಾಸದಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶವಾದ ಮಾದಕ ವಸ್ತು. ಇತ್ತೀಚೆಗಿನ ದಿನಗಳಲ್ಲಿ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್‌ ಸಿಕ್ಕಿರಲಿಲ್ಲ.
ಕದ್ರಿ ಪೊಲೀಸರು ಬಂಧಿಸಿದ್ದ ಡ್ರಗ್‌ ಪೆಡ್ಲರ್ ಹೈದರಾಲಿ ನೀಡಿದ ಮಾಹಿತಿ ಮೇರೆಗೆ ಎಲ್ಲಿಂದ ಡ್ರಗ್ಸ್ ಪೂರೈಕೆ ಆಗುತ್ತೆ ಏಂದು ತನಿಖೆ ಮಾಡಿದಾಗ ನೈಜೀರಿಯ ಪ್ರಜೆಯ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರಿನಲ್ಲಿರುವ ಮನೆಗೆ ದಾಳಿ ನಡೆಸಿದಾಗ ನೈಜೀರಿಯ ಪ್ರಜೆ ಪೀಟರ್ ಇಕೇಡಿ ಬೆಲೊನು ಸಿಕ್ಕಿಬಿದ್ದಿದ್ದಾನೆ. ಈತ ಬೆಂಗಳೂರಿನ ವಿವೇಕಾನಂದ ನಗರದಲ್ಲಿ 6.300 ಕೆಜಿ ಡ್ರಗ್ಸ್ ಸ್ಟಾಕ್ ಇಟ್ಟಿದ್ದ. ಅವಧಿ ಮೀರಿದ ವೀಸಾ ಹೊಂದಿದ್ದು, ಅಕ್ರಮವಾಗಿ ನೆಲೆಸಿದ್ದ ಎನ್ನುವುದು ಈ ವೇಳೆ ಗೊತ್ತಾಗಿದೆ. ಕೂಡಲೇ ಆತನನ್ನ ಬಂಧಿಸಿ, ಡ್ರಗ್ಸ್‌ಅನ್ನು ಜಪ್ತಿ ಮಾಡಿದ್ದಾರೆ.
ಈತ ಬೆಂಗಳೂರು ನಗರದಿಂದ, ಕರ್ನಾಟಕದ ವಿವಿಧ ಭಾಗಗಳಿಗೆ ಹಾಗೂ ಬೆಂಗಳೂರು ಮೂಲಕ ಕೇರಳಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಒಂದು ಫ್ಲ್ಯಾಟ್‌ನಲ್ಲಿ ಅವನ ಪರಿವಾರ ಇತ್ತು. ಇನ್ನೊಂದು ಫ್ಲ್ಯಾಟ್‌ನಲ್ಲಿ ಡ್ರಗ್ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top