ಪುತ್ತೂರು : ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ಎಸ್.ಎ. ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ನವರಾತ್ರಿಯ ಹಿನ್ನಲೆಯಲ್ಲಿ ಧಾರ್ಮಿಕ ಕ್ಷೇತ್ರದ ಭೇಟಿ ಸಂದರ್ಭ ಪುತ್ತೂರಿಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಎಸ್ ಭಟ್ ರವರು ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಡಾ. ಸುಧಾ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ, ಯುವರಾಜ್ ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು.
























