ಅ.12 : ಸವಣೂರಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ 

ಸವಣೂರು : ಶ್ರೀ ಶಾರದಾಂಬಾ ಸೇವಾ ಸಂಘದ ವತಿಯಿಂದ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.12 ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ಅ.12ರಂದು ಬೆಳಿಗ್ಗೆ ಉದಯ ಕುಮಾರ್ ಸರ್ವೆ ಅವರು ಧ್ವಜಾರೋಹಣ ನೆರವೇರಿಸುವರು. ಬಳಿಕ ಶ್ರೀ ದೇವಿಯ ಪ್ರತಿಷ್ಟೆ, ಗಣ ಹೋಮ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 11.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್. ವಹಿಸುವರು. ಕಡಬ ಮಂಗಳೂರು ಹಾಪ್‌ಕಾಮ್ಸ್ ನಿರ್ದೇಶಕ ಸಚಿನ್ ಕುಮಾರ್ ಜೈನ್ ಅತಿಥಿಗಳಾಗಿ ಪಾಲ್ಗೊಳ್ಳುವರು. ಹನುಮಗಿರಿ ಮೇಳದ ಯಕ್ಷಗಾನ ಕಲಾವಿದ ಪ್ರಸಾದ್ ಸವಣೂರು ಅವರು ಧಾರ್ಮಿಕ ಉಪನ್ಯಾಸ ನೀಡುವರು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.





















































 
 

ಮಧ್ಯಾಹ್ನ 1.30ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಕಲಾಸಾರಥಿ ತೋನ್ಸೆ ಪುಷ್ಕಳ್ ಕುಮಾರ್ ಇವರಿಂದ ಮಹಿಷಮರ್ಧಿನಿ ಕಥಾ ಕೀರ್ತನೆ  ನಡೆಯಲಿದೆ.

ಸಂಜೆ 4.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಶಾರದಾ ಮೂರ್ತಿಯ ವಿಜೃಂಭಣೆಯ ಶೋಭಾಯಾತ್ರೆಯು ಮುಖ್ಯ ರಸ್ತೆಯಲ್ಲಿ ಸಾಗಿ ಸರ್ವೆ ಗೌರಿ ಹೊಳೆಯಲ್ಲಿ ಶ್ರೀಶಾರದಾ ಮೂರ್ತಿಯ ಜಲಸ್ಥಂಬನ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ವಸಂತ ರೈ ಸೊರಕೆ, ಕಾರ್ಯದರ್ಶಿ ವೆಂಕಪ್ಪ ಗೌಡ ಅಡೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top