ಯೋಗಾಸನ ಸ್ಪರ್ಧೆ | ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾಣಿಯೂರು: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ ಸ್ನಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ತರಬೇತಿ ನೀಡಿದ್ದು, ಈಕೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಸಂಚಾಲಕ ಜಯಸೂರ್ಯ ರೈ ಮಾದೋಡಿ, ಆಡಳಿತ ಅಧಿಕಾರಿ ವಸಂತ ರೈ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ದಿವೀಶ್‍ ಮುರುಳ್ಯ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಶ್ರೀಮಾ ಕೆ.ಎಚ್‍. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಚಿತ ದಂಪತಿ ಪುತ್ರಿ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top