ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಯೊಬ್ಬನನ್ನು ಪೊಲೀಸರು ತೆರವು ಮಾಡಿಸಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆಯಲ್ಲಿ ಸ್ಥಳಕ್ಕಾಗಮಿಸಿದ ಪಿ.ಎಸ್.ಐ. ಶ್ರೀಕಾಂತ್ ರಾಥೋಡ್ ಅವರ ನೇತೃತ್ವದ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಕೋರ್ಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವ್ಯಾಪಾರ ನಡೆಸುತ್ತಿದ್ದುದು ಮಾತ್ರವಲ್ಲ, ಸ್ಥಳೀಯರಿಗೂ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು, ಬೀದಿ ಬದಿ ವ್ಯಾಪಾರಿಯನ್ನು ಆ ಸ್ಥಳದಿಂದ ತೆರಳುವಂತೆ ಸೂಚಿಸಿ, ತೆರವು ಮಾಡಿಸಿದ್ದಾರೆ.