ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿ.ಸಿ.ರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಭಾಗೀರಥಿ ಅವರು ಮಂಗಳೂರು ಕೊಡಿಯಾಲ್ ಬೈಲು ನಿವಾಸಿ ಪಿಡಬ್ಲೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಎನ್ನಲಾಗಿದೆ. ಚಾಲಕ ರೂಪೇಶ್ (40) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.