ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ | ಬಜರಂಗದಳ ಕಾರ್ಯಕರ್ತರಿಂದ ಕಾರ್ಯಾಚರಣೆ

ಪುತ್ತೂರು : ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ.

ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top