ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ ಆದರ್ಶ ಸಹಕರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಅನನ್ಯಾ ವಿ, ಉಪನ್ಯಾಸಕಿ ಶ್ರೀಕೀರ್ತನಾ, ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ, ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.