ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ರೈಲು ಸಂಖ್ಯೆ 06597 ಎಸ್‌ಎಂವಿಟಿ ಬೆಂಗಳೂರು – ಕಾರವಾರ ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ಟ್ರೈನ್‌ ಅಕ್ಟೋಬರ್ 30ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06598 ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ತಲುಪಲಿದೆ.
ಈ ವಿಶೇಷ ರೈಲಿಗೆ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಗಳಲ್ಲಿ ನಿಲುಗಡೆ ಇದೆ.
ರೈಲು ಸಂಖ್ಯೆ 06565 ಅಕ್ಟೋಬರ್ 30ರಂದು ರಾತ್ರಿ 11.50ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06566 ಅಕ್ಟೋಬರ್ 31ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಟು ರಾತ್ರಿ 9.15ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
ಈ ರೈಲಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳಗಳಲ್ಲಿ ನಿಲುಗಡೆ ಇದೆ.
ಪ್ರಯಾಣಿಕರು ರೈಲಿನ ಸಮಯ ಹಾಗೂ ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್ ಆದ www.enquiry.Indianrail.gov.in ಇದರಲ್ಲಿ ಪರಿಶೀಲಸಬಹುದು. ಅಥವಾ NTES ಆ್ಯಪ್ ಮೂಲಕ ಅಥವಾ 139ಕ್ಕೆ ಕರೆ ಮಾಡಿ ತಿಳಿದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top