ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಕೃಷಿಕರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೇಡಿಯಾಪು ದಿ.ಈಶ್ವರ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುವಾರ ಸಂಜೆ ಮನೆಯಲ್ಲಿ ಕೃಷಿಗೆ ಬಲಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು.
ವಿಷಯ ತಿಳಿದ ಮನೆ ಮಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.