ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ

ಹೊಸದಿಲ್ಲಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧವಿರುವಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಸಿಬಿಐ ಅಭಿಪ್ರಾಯ ಕೇಳಿತ್ತು. ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಅಭಿಪ್ರಾಯ ಕೇಳಿತ್ತು. ಹೀಗಾಗಿ ಸಿಬಿಐ ಈಗ ಅರ್ಜಿ ಸಲ್ಲಿಸಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಯಿತು. ಆ ಬಗ್ಗೆ ಸಚಿವ ಸಂಪುಟ ನಿರ್ಣಯ ಕೈಗೊಂಡಿತು.
ಕಾಂಗ್ರೆಸ್​ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧರಿಸಲಿ. ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿ ಅರ್ಜಿ ವಜಾಗೊಳಿಸಿತ್ತು.



































 
 

ಈ ನಡುವೆ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್​ ಯತ್ನಾಳ್ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯ ಕಳೆದ ತಿಂಗಳು (ಸೆಪ್ಟೆಂಬರ್​​) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸೆಪ್ಟೆಂಬರ್ 17ರಂದು ಆದೇಶ ಹೊರಡಿಸಿತ್ತು. ಪ್ರತಿವಾದಿಗಳಿಗೆ ನೋಟಿಸ್​ ನೀಡಿದ್ದರ ಜತೆಗೆ ಸಿಬಿಐ ಅಭಿಪ್ರಾಯವನ್ನೂ ಕೋರಿತ್ತು. ನಂತರ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top