ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಮೀಟರ್‌ಗಟ್ಟಲೆ ದೂರ ಹೊತ್ತೊಯ್ದ ಕಾರು

ಶಿವಮೊಗ್ಗ: ವಾಹನ ತಪಾಸಣೆ ನಡೆಸುತ್ತಿದ್ದ ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಚಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಸಹ್ಯಾದ್ರಿ ಕಾಲೇಜು ಬಳಿ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್. ರಸ್ತೆಯಲ್ಲಿ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.
ಬಿ.ಎಚ್. ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ.
ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಕಾರು ಚಾಲಕನನ್ನು ಪೊಲೀಸರು ಪತ್ತೆ ಹಚ್ಚಿ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಕಾರು ಚಾಲಕನನ್ನು ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top