ನಾಳೆ  (ಫೆ.19) : ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ವಾರ್ಷಿಕ ಕ್ರೀಡಾಕೂಟ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕ ಕ್ರೀಡಾಕೂಟ ಫೆ.19 ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಉದ್ಘಾಟಿಸಲಿದ್ದು, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ, ಪುತ್ತೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‍ ಕುಮಾರ್‍ ಭಂಡಾರಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಗಿರಿಧರ್‍ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top