ಪುತ್ತೂರು: ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುಂದರ ಪೂಜಾರಿ ಬಡಾವು ಇಂದು ಅಧಿಕಾರಿ ಸ್ವೀಕರಿಸಿದರು.
ಬೆಳಿಗ್ಗೆ ನಗರಸಭೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿoಜೆ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್. ಗೌರಿ, ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ರು, ನಗರಸಭೆ ಸದಸ್ಯರಾದ ದೀಕ್ಷಾ ಪೈ, ಪೂರ್ಣಿಮ ಬಲ್ನಾಡು ಉಪಸ್ಥಿತರಿದ್ದರು.
























