ಸುಳ್ಯ : ಡೀಸೆಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.