ವಿಟ್ಲ: ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ಸಂಸ್ಥೆ ನ.2 ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲದ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ.
ಬೆಳಿಗ್ಗೆ 10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ. ಬಳಿಕ 11 ಗಂಟೆಗೆ ಸಂಸ್ಥೆ ಉದ್ಘಾಟನೆಗೊಳ್ಳಲಿದೆ.
ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಂಕರನಾರಾಯಣ ಭಟ್ ಪುಂಡಿಕಾಯಿ ಸಂಸ್ಥೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ.ವಿ. ವಿಟ್ಲ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ರಂಜಿತ್ ಕುಮಾರ್ ಕೆಲಿಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.