40 ವರ್ಷದ ರಾಜಕಾರಣದಲ್ಲಿ ಮೊದಲ ಸಲ ಹಗರಣದ ಕೇಸಿನಲ್ಲಿ ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದುಕೊಂಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನ.6ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಆಗಲೇ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆ ಎದುರಿಸಲಿರುವುದು ಖಾತ್ರಿಯಾಗಿತ್ತು.
ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಿ ವಿಚಾರಣೆಗೆ ಹಾಜರಾಗುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಸ್ವಚ್ಛ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಎಂದು ಪ್ರತಿಪಾದಿಸುತ್ತಿದ್ದ ಸಿದ್ದರಾಮಯ್ಯನರಿಗೆ ಹಾಲಿ ಅಧಿಕಾರವಧಿಯಲ್ಲಿ ಮುಡಾ ಸೈಟ್, ವಾಲ್ಮೀಕಿ ನಿಗಮ ಮತ್ತಿತರ ಹಗರಣಗಳ ಕಳಂಕ ಮೆತ್ತಿಕೊಂಡಿದೆ.