ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ

ಮುಸ್ಲಿಮರ ಓಲೈಕೆಗಾಗಿ ಹಿಂದು ಮಠ, ಮಂದಿರಗಳನ್ನು ಸರಕಾರ ವಕ್ಫ್‌ಗೆ ಸೇರಿಸುತ್ತಿದೆ ಎಂದು ಆರೋಪ

ವಿಜಯಪುರ: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. 1954-55ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿ ಅದಕ್ಕೆ ಹೆಚ್ಚಿನ ಅಧಿಕಾರ ನೀಡಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರ‌ಂದ್ಲಾಜೆ ಹೇಳಿದ್ದಾರೆ.
ವಕ್ಫ್ ಆಸ್ತಿ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಸೋಮಚಾರ ವಿಜಯಪುರದಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ವಕ್ಫ್ ಕಾಯ್ದೆ ಜಾರಿಗೆ ತಂದು ಅದಕ್ಕೆ ಹೆಚ್ಚಿನ ಅಧಿಕಾರ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಯಾವುದೇ ಜಮೀನು ವಕ್ಫ್‌ನದ್ದಾಗುವುದಕ್ಕೆ ಸಾಧ್ಯವಿಲ್ಲ. ಇಲ್ಲಿನ ಮಠಗಳಿಗೆ ಚಾಲುಕ್ಯರು, ಹೊಯ್ಸಳರು, ಕಿತ್ತೂರು ರಾಣಿ ಚನ್ನಮ್ಮ ಜಮೀನು ಕೊಟ್ಟದ್ದು. ಈ ಆಸ್ತಿಗಳನ್ನು ಜಮೀರ್ ಖಾನ್ ವಕ್ಫ್‌ ಮಾಡಿ ನೋಟಿಸ್ ಕೊಡಿಸಿದ್ದಾರೆ. ಒಂದು ರೀತಿಯಲ್ಲಿ ಮುಸ್ಲಿಮರ ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರುವುದಕ್ಕೆ ಸಿದ್ದರಾಮಯ್ಯ ಹಾಗೂ‌ ಜಮೀರ್ ಹೊರಟಿದ್ದಾರೆ. ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ‌ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ. ರಾಜ್ಯದಲ್ಲಿ ಹಲವಾರು ದೇವಸ್ಥಾನಗಳು ವಕ್ಫ್‌ ಎಂದಾಗಿವೆ. ಇದರ ಹಿಂದೆ ಯಾವ ರೀತಿಯ ಷಡ್ಯಂತ್ರ ಇದೆಯೆಂದು ಅರ್ಥವಾಗುತ್ತದೆ ಎಂದು ಹೇಳಿದರು.



































 
 

ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿಯನ್ನು ವಕ್ಪ್ ಅಡಿಯಲ್ಲಿ ತರಲು ಹೊರಟಿದ್ದಾರೆ. ಕಾನೂನು ಬಾಹಿರವಾಗಿ ವಕ್ಫ್‌ ಅದಾಲತ್ ಮಾಡುತ್ತಿದ್ದಾರೆ. ಇವರು ಯಾವ ಕಾನೂನು ಅಡಿ ವಕ್ಫ್ ಅದಾಲತ್ ಮಾಡುತ್ತಿದ್ದಾರೆ ಎಂದು ತಿಳಿಸಬೇಕಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು, ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top