ಕೊಕ್ಕಡ: ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ಡಿ’ಸೋಜಾ (19) ಮೃತಪಟ್ಟವರು.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕ ಕೆಲ ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ ಉಪ್ಪಿನಂಗಡಿ ಕಾಲೇಜಿಗೆ ಇಂದು ರಜೆ ಘೋಷಿಸಲಾಯಿತು.