ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು

ಮಂಗಳೂರು: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವುಗೈದ ಘಟನೆ ನಡೆದಿದೆ.

ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು ಗೋಣಿಯಲ್ಲಿ ತುಂಬಿದ ಆಗಂತುಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಣಿ ಹೆಗಲಿಗೇರಿಸಿ ಹೋಗುತ್ತಿರವ ಆಗಂತುಕರ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ನಡೆದದ ಸ್ಥಳಕ್ಕೆ ಆಗಮಿಸಿ ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.





































 
 

ನೂರಾರು ವರ್ಷ ಹಳೆಯದಾದ ಸುಮಾರು ಒಂದೂವರೆ ಕೇಜಿ ತೂಕದ ದೇವರ ಬೆಳ್ಳಿಯ ಪೀಠ, ಚಿನ್ನದ ಮೂಗುತಿ, ದೇವರಿಗೆ ಸಂಬಂಧಿಸಿದ ಕೊಡ, 2 ಕೆಜಿ ತೂಕದ ಬೆಳ್ಳಿಯ ಆಭರಣಗಳು ಹಾಗೂ 3 ಪವನ್ ತೂಕದ ಚಿನ್ನದ ಆಭರಣ ಕಳ್ಳತನವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top