ಪುತ್ತೂರು : ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಹಾಗೂ ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಕರ್ನಾಟಕದ ಇಂದಿನ ಅಗತ್ಯಗಳು “ಜನ ಸಂವಾದ” ಕಾರ್ಯಕ್ರಮ ಫೆ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ತನಕ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ “ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷ ಆಡಳಿತ”, ಪತ್ರಕರ್ತ ಬಿ.ಎಂ.ಹನೀಫ್ “ಸಾಮಾಜಿಕ ಅಗತ್ಯಗಳು” ಹಾಗೂ ಗಾಂಧಿ ವಿಚಾರ ವೇದಿಕೆ ವ್ಯವಸ್ಥಾಪಕ ಸದಸ್ಯ, ವಿಜಯಪುರ ಚಾಣಕ್ಯ ಕಡಿಯರ್ ಅಕಾಡೆಮಿಯ ಎನ್.ಎಂ.ಬಿರಾದಾರ “ಯುವ ಜನತೆಯ ಅಗತ್ಯಗಳು” ಕುರಿತು ವಿಷಯ ಮಂಡನೆ ಮತ್ತು ಸಂವಾದ ನಡೆಸಿಕೊಡುವರು.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಚಿಂತಕ ವಿಲ್ಫ್ರೆಡ್ ಡಿ’ಸೋಜಾ, ಗಾಂಧಿ ವಿಚಾರ ವೇದಿಕೆ ಅಧ್ಯಕ್ಷ ಶ್ರೀಧರ ಭಿಡೆ, ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಎ.ಸದಾನಂದ ಶೆಟ್ಟಿ, ಗಾಂಧಿ ವಿಚಾರ ವೇದಿಕೆ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರ ಪಾಲ್ಗೊಳ್ಳಲಿದ್ದಾರೆ ಎಂದು ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.