ಸಂಡೂರು ಉಪಚುನಾವಣೆ | ಮತದಾರರ ಬೃಹತ್ ಸಮಾವೇಶ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ  ಭಾಗವಹಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ,  ಶ್ರೀ ರಾಮುಲು , ಅರಗ ಜ್ಞಾನೇಂದ್ರ , ಶಾಸಕ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top