ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಛದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ. ಆ‌ರ್. ವಿನಂತಿ

ಕಡಬ: ನ.15 ರಂದು ಗುಂಡ್ಯದಲ್ಲಿ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯುವ ಬೃಹತ್ ಪ್ರತಿಭಟನೆಗೆ ಬೆಂಬಲಿಸಿ, ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಛದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ. ಆ‌ ರ್.ವಿನಂತಿಸಿದ್ದಾರೆ.

ಈ ಪ್ರತಿಭಟನೆ ಪಶ್ಚಿಮಘಟ್ಟ ತಪ್ಪಲಿನ ಜನರ ಬದುಕಿಗೆ ಬೇಕಾಗಿ ನಡೆಯುತ್ತಿದೆ. ಇದರಲ್ಲಿ ಜಾತಿ, ಧರ್ಮ, ಪಕ್ಷ ಯಾವುದೂ ಇಲ್ಲ, ಯೋಜನೆ ಜಾರಿಯಾಗುವ ಮುನ್ನ ನಾವು ಎಚ್ಚೆತ್ತುಕೊಳ್ಳದಿದ್ದರೆ ಪಶ್ಚಿಮ ಘಟ್ಟ ತಪ್ಪಲಿನ ಮೂರು ತಾಲೂಕುಗಳ ಭಾದಿತ ಗ್ರಾಮ ಮತ್ತು ಇತರ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗಿ ಜೀವನ ನಡೆಸಲು ಕಷ್ಟ ಆಗುವ ದಿನ ಬರಲಿದೆ.

ಆದ್ದರಿಂದ ಎಲ್ಲರೂ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಅವರು ವಿನಂತಿಸಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top