ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ

ಸೋಮವಾರದಿಂದ ಮೇಲ್ಮನವಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.
ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿ.ಎನ್‌ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.
ಅನಾರೋಗ್ಯದ ಕಾರಣಕ್ಕಾಗಿ ದರ್ಶನ್‌ ಅವರಿಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈ ಎಲ್ಲ ಅಂಶಗಳನ್ನು ಪೊಲೀಸರು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top