ಪುತ್ತೂರು: ನಾವು ಆಯ್ದುಕೊಳ್ಳುವ ಜ್ಞಾನದ ಶಾಖೆ ಯಾವುದೇ ಆಗಿದ್ದರು ಕೂಡ ಅದರಲ್ಲಿ ಮುಖ್ಯವಾಗಿ ನಮಗೆ ತೃಪ್ತಿ ಇರಬೇಕು, ಹಾಗೆಯೇ ಮಾನವಿಕ ವಿಯಷಯಗಳಲ್ಲಿ ಪ್ರತಿಯೊಂದು ವಿxಯ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗೆಯೇ ಈ ತಂತ್ರಜ್ಞಾನ ಯುಗದಲ್ಲಿ ಮಾನವಿಕ ವಿಷಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಮುಂಬೈ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ವಿಶ್ರಾಂತ ಪ್ರಾದ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿ ಐಕ್ಯೂಎಸಿ ಘಟಕ ಮತ್ತು ಸಮಾಜ ವಿಜ್ಞಾನ ವಿಭಾಗದ ( ಇತಿಹಾಸ, ಅರ್ಥಶಾಸ್ತ್ರ, ರಾಜಕೀಯ ವಿಜ್ಞಾನ, ಸಮಾಜ ಶಾಸ್ತ್ರ, ಮನೋವಿಜ್ಞಾನ, ಪತ್ರಿಕೋದ್ಯಮ ) ಜಂಟಿ ಆಶ್ರಯದಲ್ಲಿ ಸಮಾಜ ವಿಜ್ಞಾನ ಶಿಕ್ಷಣದ ಪ್ರಸ್ತುತ ಸ್ಥಿತಿ ಮತ್ತು ಭವಿ?ದ ಸಾಧ್ಯತೆಗಳು ಎಂಬ ವಿ?ಯದ ಕುರಿತು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಭಾರತವು ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ. ಅದರಲ್ಲಿ ಸಮಾಜ ವಿಜ್ಞಾನ ವಿಭಾಗಗಳು ತನ್ನದೇ ಆದ ಮಹತ್ವವನ್ನು ಒಳಗೊಂಡಿದೆ ಅದನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್, ಸ್ನಾತಕೋತ್ತರ ವಿಭಾಗದ ಡೀನ್, ಕಾರ್ಯಕ್ರಮದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ., ಕಲಾ ವಿಭಾಗದ ಡೀನ್, ಡಾ.ದುರ್ಗಾರತ್ನ. ಸಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಮಾಜ ವಿಜ್ಞಾನ ಶಿಕ್ಷಣದ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಸಾಧ್ಯತೆಗಳು ವಿಷಯದ ಕುರಿತು ಸಮಗ್ರ ಗೋಷ್ಠಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಹಾವೇರಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಹಾಗೂ ರಿಜಿಸ್ಟ್ರಾರ್ ಪ್ರೊ. ಸಿದ್ದಪ್ಪ ಬಾಗಲಕೋಟೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬೇರೆ ಬೇರೆ ಕಡೆಗಳಿಂದ ಆಗಮಿಸಿದ ಸಂಶೋಧನಾರ್ಥಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಮಾನವಿಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬಂಧ ಮಂಡನೆ ನಡೆಯಿತು.
ಸಮಾರೋಪ ಸಮಾರಂಭ :
ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರವೀಂದ್ರ ಬೈಪದವು ಮಾತನಾಡಿ, ಮಾನವಿಕ ವಿಷಯಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಏಳುಬೀಳುಗಳನ್ನು ಎದುರಿಸುತ್ತಿದೆ ಹಾಗೂ ಮೌಲ್ಯಗಳನ್ನು ಕಳೆದುಕೊಳ್ಳುತ್ತಿವೆ. ಸಮಾಜ ವಿಜ್ಞಾನ ವಿಷಯಗಳ ಮೌಲ್ಯವರ್ಧನೆಯ ಜೊತೆಗೆ ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುವ ರೀತಿಯಲ್ಲಿ ಸಿಲಬಸ್ ನ ರಚನೆಗಳನ್ನು ವಿಶ್ವವಿದ್ಯಾನಿಲಯಗಳಲ್ಲಿ ಅಗತ್ಯವಾಗಿ ಆಗಬೇಕಾಗಿದೆ ಎಂದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ.ಎಸ್. ಸ್ವಾಗತಿಸಿ, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ವಂದಿಸಿದರು. ಉಪನ್ಯಾಸಕಿ ಪ್ರಜ್ಞಾ ಪಿ.ಪಿ., ದೇಚಮ್ಮ ನಿರ್ವಹಿಸಿದರು.