ಮಂಗಳೂರು: ಉಚ್ಚಿಲ ಸಮುದ್ರದ ಬಳಿಕ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತಪಟ್ಟ ಯುವತಿಯರು
ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ ಸ್ವಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೃತಪಟ್ಟಿದ್ದಾರೆ. ಮೈಸೂರು ಮೂಲದ ಯುವತಿಯರು ಶನಿವಾರ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದುಬೆಳಿಗ್ಗೆ 8.30ರ ಸುಮಾರಿಗೆ ಈಜು ಕೊಳದಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.