ಇಂದು ಮದ್ಯ ಮಾರಾಟ ಬಂದ್‌ ಇಲ್ಲ

ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಬಂದ್‌ ಕರೆ ವಾಪಸ್‌

ಬೆಂಗಳೂರು: ಇಂದು ನಡೆಯಬೇಕಿದ್ದ ಬಾರ್‌, ವೈನ್‌ಶಾಪ್‌ ಬಂದ್‌ ನಿರ್ಧಾರವನ್ನು ಹಿಂದೆಗೆದುಕೊಳ್ಳಲಾಗಿದೆ. ಮದ್ಯ ಮಾರಾಟ ಮಳಿಗೆಗಳು ಎಂದಿನಂತೆ ವ್ಯಾಪಾರ ನಡೆಸಲಿವೆ. ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.
ನ.19ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್ ನವೆಂಬರ್‌ 20ರ ಮದ್ಯ ಮಾರಾಟ ಬಂದ್​ ಕರೆ ವಾಪಸ್ ಪಡೆದುಕೊಂಡಿದೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದರೆ ಕರ್ನಾಟಕ ಬಾರ್ ಅಸೋಸಿಯೇಷನ್ ನ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ನಡೆಸಿದ ಮಾತುಕತೆ ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್​ ವಾಪಸ್ ಪಡೆದುಕೊಂಡಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ.
ನಮ್ಮ‌ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಕೊಟ್ಟಿದ್ದವು. ಈಗ ನಮ್ಮ ಸಮಸ್ಯೆ, ಕುಂದುಕೊರತೆಗಳನ್ನು ಸಿದ್ದರಾಮಯ್ಯನವರು ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್‌ಗೆ ನಮ್ಮ ಬೇಡಿಕೆ ಕುರಿತು ವರದಿ ಕೋಡಲು ಹೇಳಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top