ಜಾರ್ಖಂಡ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಭಾರಿ ಹಣಾಹಣಿ
ಮುಂಬಯಿ: ಮಹಾರಾಷ್ಟ್ರದ ಮತ ಎಣಿಕೆ ಮುಂದುವರಿದಿರುವಂತೆ ಬಿಜೆಪಿ ನೇತೃತ್ವದ ಮಹಾಯೂತಿ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದೆ. 288 ಕ್ಷೇತ್ರಗಳ ಪೈಕಿ 207 ಕ್ಷೇತ್ರಗಳಲ್ಲಿ ಮಹಾಯುತಿ ಮುಂದೆ ಇದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 76 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ.
ಜಾರ್ಖಂಡ್‌ನಲ್ಲಿ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಕ್ಷಣಕ್ಷಣಕ್ಕೂ ಟ್ರೆಂಡ್ ಬದಲಾಗುತ್ತಿದ್ದು, ಸದ್ಯ ಬಿಜೆಪಿ 41ರಲ್ಲಿ ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಕೂಡ ಏರುಪೇರು ದಾಖಲಾಗುತ್ತಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೀಶ್ವರ್ ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ಆರಂಭಿಕ ಮುನ್ನಡೆಯಲ್ಲಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಮುಸ್ಲಿಂ ಲೀಗ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾಡ್ರಾ ಭಾರಿ ಮುನ್ನಡೆಯಲ್ಲಿದ್ದು, ಅಲ್ಲಿ ಈಗಾಗಲೇ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರು ವಿಜಯೋತ್ಸವ ಶುರು ಮಾಡಿದ್ದಾರೆ. ಪ್ರಿಯಾಂಕ ಗಾಂಧಿ ವಾಡ್ರಾ ಮುನ್ನಡೆ 90 ಸಾವಿರದಷ್ಟಿದೆ.