ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ | ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ

ಪುತ್ತೂರು: ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಶಿವಪ್ಪ ಅವರ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂಧಿಸಿದ್ದರು. ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಅಮಾನವೀಯ ರೀತಿಯಲ್ಲಿ ಇರಿಸಿ ಹೋದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವ್ರೋ ಅವರ ಸಹಿತ ಮೂವರ ವಿರುದ್ದ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸ್ಕ್ಯಾನಿ ಮೇಸ್ತ್ರಿ ಎಂಬವರನ್ನು ಆರಂಭದಲ್ಲಿ ಬಂಧಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವ್ರೋ ಅವರ ಪುತ್ರನ ವಿರುದ್ಧವೂ ಆದಿ ದ್ರಾವಿಡ ಸಂಘಟನೆ ಪೊಲೀಸರಿಗೆ ದೂರು ನೀಡಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹೆನ್ರಿ ತಾವ್ರೋ ಪುತ್ರ ಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂಬವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಹೆನ್ರಿ ತಾವೋ ಅವರ ಬಂಧನಕ್ಕೆ ಆಗ್ರಹಿಸಿ ಆದಿ ದ್ರಾವಿಡ ಸೇವಾ ಸಂಘ ಪ್ರತಿಭಟನೆಯನ್ನೂ ಹಮ್ಮಿಕೊಂಡಿತ್ತು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top