ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ-2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್, ಕಾರ್ಯದರ್ಶಿ ಪೂವಪ್ಪ ಗೌಡ, ಟ್ರಸ್ಟ್ ಗೌರವಾಧ್ಯಕ್ಷ ಎ.ವಿ.ನಾರಾಯಣ, ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ, ಕಾರ್ಯದರ್ಶಿ ದಿವ್ಯಪ್ರಸಾದ್ ಎ.ಎಮ್., ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ವಸಂತ ವೀರಮಂಗಲ ಉಪಸ್ಥಿತರಿದ್ದರು.