ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಕ್ರೀಡಕೂಟ ಡಿ.25 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ನಿವೇಶದ ನಾಗದೇವರ ಸನ್ನಿಧಿಯಲ್ಲಿ ನಡೆಯಿತು.
ನಾಗಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಮಾತೃ ಸಮಿತಿ ಅಧ್ಯಕ್ಷ ಸುರೇಶ್ ಗೌಡ ಬೈಲು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮದ ಸಮುದಾಯ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಯೋಜನೆಯ ಯಶಸ್ಸಿಗೆ ಸಹಕರಿಸಬೇಕಾಗಿ ವಿನಂತಿಸಲಾಯಿತು.