ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ | ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶ್ವಿನಿ ಎಲ್‍ ಶೆಟ್ಟಿ,,ಉದಯ ರೈ ಮಾದೋಡಿ

ಸವಣೂರು:  ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ ಹಾಗೂ ಯುಡೋ ಪ್ರಶಸ್ತಿ ಪುರಸ್ಕೃತರಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿಯವರಿಗೆ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ ಸಂಘದ ಸಭಾಭವನದಲ್ಲಿ ನಡೆಯಿತು.

ಸಮಾರಂಭದಲ್ಲಿ ಶಶಿಕುಮಾರ್ ರೈ ಬಾಲೊಟ್ಟು, ಉದಯ ರೈ ಮಾದೋಡಿ, ಅಶ್ವಿನ್ ಎಲ್. ಶೆಟ್ಟಿರವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ  ಸನ್ಮಾನಿಸಿ, ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅತ್ಯುತ್ತಮ ಆಡಳಿತ ಮಂಡಳಿ ಮತ್ತು ಅನುಭವಿ ಸಿಬ್ಬಂದಿಗಳಿದ್ದಾರೆ. ಅಪೆಕ್ಸ್ ಬ್ಯಾಂಕಿನ ಅಧಿಕಾರಿಗಳ ತಂಡ ಸವಣೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ಸಿಇಓ ಚಂದ್ರಶೇಖರ್ ಮತ್ತು ಸಿಬ್ಬಂದಿಗಳ ಕಾರವೈಖರಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ನೀಡುತ್ತಾರೆ. ಸಿಇಓ ಚಂದ್ರಶೇಖರ್‌ರವರು ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಅಧ್ಯಕ್ಷ ತಾರಾನಾಥ ಕಾಯರ್ಗ ಮತ್ತು ಆಡಳಿತ ಮಂಡಳಿಯಿಂದ ಇಲ್ಲಿ ಉತ್ತಮವಾದ ಸೇವೆ ದೊರೆಯುತ್ತಿದ್ದು, ಮಾದರಿ ಸಂಸ್ಥೆಯಾಗಿದೆ. ಬ್ಯಾಂಕಿನ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿರುವ ಉದಯ ರೈಯವರು ರಾಜ್ಯ ಮಟ್ಟದ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ ಎಂದ ಬಾಲೊಟ್ಟು ಜನತಾ ಬಜಾರ್ ಸಂಸ್ಥೆಯು ನಮ್ಮದಲ್ಲಿ ಇದ್ದಾಗ, ಅದರ ಅಡಳಿತ ಚುಕ್ಕಾಣಿ ಹಿಡಿದು, ಅದನ್ನು ಲಾಭದತ್ತ ಕೊಂಡೊಯ್ದ ಕೀರ್ತಿ ಉದಯ ರೈ ಮಾದೋಡಿಯವರಿಗೆ ಸಲ್ಲುತ್ತದೆ. ಅಶ್ವಿನ್ ಎಲ್ ಶೆಟ್ಟಿಯವರಿಗೆ ಮುಂದೆಯೂ ಒಳ್ಳೆಯ ಹೆಸರು ಬರಲಿ ಎಂದು ಹೇಳಿ, ಗ್ರಾಹಕರನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ತನ್ನತ್ತ ಸೆಳೆಯುವ ಮೂಲಕ ಸಹಕಾರ ಸಂಸ್ಥೆಯು ಪರಸ್ಪರ ಸಹಕಾರದಿಂದ ಬೆಳೆಯಲು ಸಾಧ್ಯವಾಗಿದೆ ಎಂದರು.































 
 

ರಾಜ್ಯ ಸಹಕಾರ ಗ್ರಾಹಕರ ಮಹಿಪಿ ಮಂಡಲದ ನಿರ್ದೇ ಶಕ ಉದಯ ರೈ ಮಾದೋಡಿ ಮಾತನಾಡಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಎರಡು ಬಾರಿ ಅಧ್ಯಕ್ಷನಾಗಿ ಬಳಿಕ, ಮಂಗಳೂರಿನ ಜನತಾ ಬಜಾರ್‌ನಲ್ಲಿ ಅಧ್ಯಕ್ಷನಾಗುವ ಯೋಗ ದೊರೆಯಿತು. ಇದೀಗ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದಲ್ಲಿ ಎರಡನೇ ಬಾರಿಗೆ ನಿರ್ದೇಶಕನಾಗುವ ಅವಕಾಶ ಒಲಿದು ಬಂದಿದೆ. ತನ್ನ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಶಶಿಕುಮಾರ್ ರೈ ಬಾಳ್ಕೊಟ್ಟುರವರು ಮುಂಬರುವ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ಚುನಾವಣೆಗೆ ನಿಲ್ಲುವ ಯೋಗ ಬರಲಿ ಎಂದು ಶುಭಹಾರೈಸಿದರು.

ಯುಡೋ ಪ್ರಶಸ್ತಿ ಪುರಸ್ಕೃತ ಅಶ್ವಿನ್ ಎಲ್. ಶೆಟ್ಟಿಯವರು ಮಾತನಾಡಿ, ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷ ತಂದಿದೆ ಎಂದು ಹೇಳಿ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಸಾಗತಿಸಿ, ಮಾತನಾಡಿ, ಎಸ್‌ ಸಿಡಿಸಿಸಿ ಬ್ಯಾಂಕಿನ ನಿರ್ದೇ ಶಕರಾಗಿ ಶಶಿಕುಮಾರ್ ರೈಯವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸವನ್ನು ಮಾಡುವ ಮೂಲಕ ಸಹಕಾರ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಎಸಿಡಿಸಿಸಿ ಬ್ಯಾಂಕ್‌ನಲ್ಲಿ ಕಡತ ವಿಲೇವಾರಿ ಸೇರಿದಂತೆ ಯಾವುದೇ ಕೆಲಸ ಇದ್ದರೂ ಶಶಿಕುಮಾರ್ ರೈಯವರು ಬಹಳಷ್ಟು ಮುತುವರ್ಜಿಯಿಂದ ಕೆಲಸವನ್ನು ಮಾಡುತ್ತಾರೆ. ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಉದಯ ರೈಯವರು ಬ್ಯಾಂಕಿನ ಅಭಿವೃದ್ಧಿಯಲ್ಲಿ ಒಳ್ಳೆಯ ಕೆಲಸವನ್ನು ಮಾಡಿದರೆ, ನಮ್ಮ ಸಂಘದ ಮಾಜಿ ಅಧ್ಯಕ್ಷ ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ ಅಳಿಯ ಅಶ್ವಿನ್ ಶೆಟ್ಟಿಯವರ ಇಂಜಿನಿಯರಿಂಗ್ ಕ್ಷೇತ್ರದ ಸೇವೆಗೆ ಯುಡೋ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ವಂದಿಸಿದರು. ಸಂಘದ ಉಪಕಾಯನಿರ್ವಹಣಾಕಾರಿ ಜಲಜಾ ಎಚ್. ರೈ, ನವೋದಯ ಪ್ರೇರಕಿ ಪ್ರೇಮಾ ಪ್ರಾರ್ಥನೆಗೈದರು. ಸಂಘದ ನಿರ್ದೇಶಕರುಗಳಾದ ಗಣೇಶ್ ನಿಡ್ವಣ್ಣಾಯ ಕುಮಾರಮಂಗಲ, ಚೆನ್ನಪ್ಪ ಗೌಡ ನೂಜಿ, ಪ್ರಕಾಶ್ ರೈ ಸಾರಕರೆ, ಶಿವಪ್ರಸಾದ್ ಎಂ.ಎಸ್, ಕಳುವಾಜಿ, ಜ್ಞಾನೇಶ್ವರಿ, ಸೀತಾಲಕ್ಷ್ಮೀ, ಗಂಗಾಧರ ಪರಿಯಡ್ಕ, ತಿಮ್ಮಪ್ಪ ಬನಾರಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಸೂಪರ್‌ವೈಸರ್ ವಸಂತ ಎಸ್, ಸಂಘದ ಬೆಳಂದೂರು ಶಾಖಾ ವ್ಯವಸ್ಥಾಪಕ ಪಕೀರ ಎ ಮಾಸ್ ಸಂಸ್ಥೆಯ ಸವಣೂರು ಶಾಖಾ ವ್ಯವಸ್ಥಾಪಕ ಯತೀಶ್, ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top