ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ

ಡಿ.31ರೊಳಗೆ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸೂಚನೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ.

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಈಗ ಡಿಸೆಂಬರ್ 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.































 
 

ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಇಷ್ಟರ ತನಕ 55 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ ಸರಕಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ. ಈ ಮೂಲಕ ಎಚ್‌ಎಸ್‌ಆರ್‌ಪಿ ಗಡುವು ಐದನೇ ಬಾರಿಗೆ ವಿಸ್ತಋಣೆಯಾದಂತಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top