ತಿರುವನಂತಪುರಂ: ಕೇರಳದ ಅಲಪುಳ ಜಿಲ್ಲೆಯ ಚಂಗನಶ್ಶೇರಿ ಸಮೀಪ ನಿನ್ನೆ ರಾತ್ರಿ ಭಾರಿ ಮಳೆಯಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೆ ಸರ್ಕಾರಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಂದನಂ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷ ಎಂಬಿಬಿಎಸ್ ವಿದ್ಯಾರ್ಥಿಗಳಾದ ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತಪಟ್ಟವರು. ಕರ್ಲಕೋಡ್ ಎಂಬಲ್ಲಿ ಸೋಮವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.
ಕೇರಳದಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರಿ ಮಳೆ ಸುರಿಯುತ್ತಿದ್ದು, ಹೀಗಾಗಿ ಕಾರು ಚಾಲಕನಿಗೆ ಬಸ್ ಸರಿಯಾಗಿ ಗೋಚರಿಸುತ್ತಿರಲಿಲ್ಲ ಎನ್ನಲಾಗಿದೆ. ಹಳೆ ಕಾರಿನಲ್ಲಿ 11 ಮಂದಿ ಪ್ರಯಾಣಿಕರಿದ್ದರು. ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೂ ಗಾಯಗಳಾಗಿವೆ.