ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ

ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.
ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು. ಸಿನಿಮಾ ಸ್ಕ್ರೀನಿಂಗ್‌ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ. ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top