ಚೆಲ್ಯಡ್ಕ ಸೇತುವೆ ನಿರ್ಮಾಣದ ಹಿನ್ನಲೆ | ಇಲಾಖೆಯಿಂದ ಬದಲಿ ಮಾರ್ಗ ಸೂಚಿ

ಪುತ್ತೂರು : ದೇವಸ್ಯ-ಪಾಣಾಜೆ ರಸ್ತೆಯ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿ ಶಿಥಿಲಾವಸ್ಥೆಯಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಬೇಕಾಗಿರುವುದರಿಂದ ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ -ಪಾಣಾಜೆ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಡಿ.9 ರಿಂದ ಮುಂದಿನ ಮೇ 6 ರ ತನಕ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು.

ಈ ಅವಧಿಯಲ್ಲಿ ಬದಲಿ ರಸ್ತೆಯನ್ನು ಬಳಸಿಕೊಂಡು ಸಾರ್ವಜನಿಕರು ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ವಾಹನ ಸವಾರರು ದೇವಸ್ಯ-ಬೈರೋಡಿ-ಕಾಫಿಕಾಡು -ಕೈಕಾರ ರಸ್ತೆಯಲ್ಲಿ ಸಂಚರಿಸುವ ಮೂಲಕ ಹೊಸ ಸೇತುವೆ ನಿರ್ಮಾಣ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಕೋರಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top