ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ಆಳ್ವಾಸ್ ವಿರಾಸತ್-2024 ಪ್ರಶಸ್ತಿ ಪ್ರದಾನ

ವಿದ್ಯಾಗಿರಿ (ಮೂಡುಬಿದಿರೆ): ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 30ನೇ ವರ್ಷದ ಆಳ್ವಾಸ್ ವಿರಾಸತ್‌ನಲ್ಲಿ ಬುಧವಾರ ಸಂಜೆ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನಿಸಲಾಯಿತು.

ಬಡವರು, ದೀನದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ ಎಂದು ಪಂಡಿತ್ ವೆಂಕಟೇಶ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾಗಿ ನುಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು.

ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ಥಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.
ಡಾ.ಮೋಹನ್‌ ಅಳ್ವ, ಕಪಿ.ಜಿ.ಆರ್‌.ಸಿಂಧ್ಯಾ ಮತ್ತಿತರರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top