ವೀರಮಂಗಲ : ವೀರಮಂಗಲ ಆನಾಜೆ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ವಾರ್ಷಿಕ ಸಂಭ್ರಮದ ಅಂಗವಾಗಿ 2024 ರ ಸಾಲಿನ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಡಿಸೆಂಬರ್14-ರಂದು ಆನಾಜೆಯಲ್ಲಿ ನಡೆಯಲಿದೆ.
ಸಂಜೆ 5:30 ಕ್ಕೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಪ್ರಾರಂಭವಾಗಲಿದ್ದು, 7:30 ಕ್ಕೆ ಮಹಾ ಪೂಜೆ ನಡೆಯಲಿದೆ.
ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾಸರಗೋಡು ಸಂಸ್ಕೃತ ಭಾರತಿ ಜಿಲ್ಲಾ ಸಂಯೋಜಕರು, ಎಸ್,ಎಂ. ಉಡುಪ ಕುಂಟಾರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಲೋಕ ಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಸಾಂದೀಪನಿ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಜಯಮಾಲ ವಿ.ಎನ್, ಬಾಗವಹಿಸಲಿದ್ದಾರೆ. ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ಲಕ್ಷ್ಮೀಶ ತಂತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಬಳಿಕ ರಾತ್ರಿ 9 ರಿಂದ ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಆನ್ನ ಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ವೈಭವ
ಶ್ರೀ ಕೃಷ್ಣ ಕಲಾ ಕೇಂದ್ರ ಮತ್ತು ಭಕ್ತಕೋಡಿ ವಿದ್ಯಾರ್ಥಿಗಳಿಂದ, ವಿದ್ವಾನ್ ಗೋಪಾಲಕೃಷ್ಣ ವೀರಮಂಗಲರವರ ರಚನೆ ಮತ್ತು ನಿರ್ದೇಶನದಲ್ಲಿ ಜಾನಪದ ಪಾಡ್ದನ ಆಧಾರಿತ , ಭಕ್ತಿ ಪ್ರಧಾನವಾದ ವರಾಹ ರೂಪ ಎಂಬ ತುಳು ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ. ಬಳಿಕ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದಲ್ಲಿ. ಲಯನ್ ಡಿ ಶೆಟ್ಟಿ ಇವರ ಸಲಹೆ ಸಹಕಾರದೊಂದಿಗೆ ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ, ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಮಂಗಳೂರು ಮೀನನಾಥ ರಾಘವೇಂದ್ರ ರೈ ಅಭಿನಯದಲ್ಲಿ , ರಂಗ್ದ ರಾಜ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ “ಅಮ್ಮೆರ್” ತುಳು ಹಾಸ್ಯಮಯ ನಾಟಕ ನಡೆಯಲಿದೆ.
ಸಾರ್ವಜನಿಕ ಶನಿ ಪೂಜೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವತಾ ಕಾರ್ಯದಲ್ಲಿ ಭಾಗವಹಿಸಿ, ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿ ಆನಾಜೆ, ವೀರಮಂಗಲ ಅಧ್ಯಕ್ಷ ಬೆಳಿಯಪ್ಪ ಗೌಡ ವಿ., ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನ ಆನಾಜೆ, ವೀರಮಂಗಲ ಅಧ್ಯಕ್ಷ ಗೋಪಾಲಕೃಷ್ಣ ವೀರಮಂಗಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























