ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವತ್ತ ಬಿಜೆಪಿ ನಿರ್ಣಾಯಕ ಹೆಜ್ಜೆ

ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅವಕಾಶ ಕೊಡುವ ಬಹುನಿರೀಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದ ಭರವಸೆಯನ್ನು ಜಾರಿಗೊಳಿಸುವಲ್ಲಿ ನಿರ್ಣಾಯಕ ಹೆಜ್ಜೆ ಇಟ್ಟಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು.































 
 

ಮಸೂದೆ ಮಂಡನೆಯ ಬೆನ್ನಲ್ಲೇ ಇಂಡಿ ಒಕ್ಕೂಟದ ಸದಸ್ಯರು ಭಾರಿ ವಿರೋಧ ವ್ಯಕ್ತಪಡಿಸಿದರು. ಸಂಸದ ಮನೀಶ್‌ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕಕಾಲದಲ್ಲಿ ಮಾಡಲು ಸಾಧ್ಯ? ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ. ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದರು.

ಎಲ್ಲ ರಾಜ್ಯಗಳು ವಿಭಿನ್ನ ವೈವಿಧ್ಯತೆ ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಕ್ಕೂಟ ವ್ಯವಸ್ಥೆ ಮಾಡಿದರು. ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ನಾಲ್ಕು ರಾಜ್ಯಗಳ ಚುನಾವಣೆ ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ವಿರೋಧ ವ್ಯಕ್ತಪಡಿಸಿದರು.

ಮಸೂದೆ ಮಂಡನೆಯ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಾಂಗ್ರೆಸ್‌, ಟಿಡಿಪಿ ಸೇರಿದಂತೆ ಎನ್‌ಡಿಎ ಮಿತ್ರ ಪಕ್ಷಗಳು ಸದಸ್ಯರಿಗೆ ವಿಪ್‌ ಜಾರಿ ಮಾಡಿದ್ದವು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top