ಸಿಎನ್‌ಜಿ, ಪಿಎನ್‌ಜಿ ಸಾಗಿಸುತ್ತಿದ್ದ ಟ್ರಕ್‌ಗಳು ಡಿಕ್ಕಿ ಹೊಡೆದು ಅನಾಹುತ
ಜೈಪುರ : ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು 5 ಮಂದಿ ಜೀವಂತ ದಹನವಾಗಿ 40ಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ಇಂದು ಮುಂಜನೆ 5.30ರ ಹೊತ್ತಿಗೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ರಸ್ತೆಯನ್ನು ಬಂದ್ ಮಾಡಲಾಗಿದೆ.
ಪೆಟ್ರೋಲು ಪಂಪ್‌ಗೂ ಬೆಂಕಿ ಹತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಸುಮಾರು15 ಜನರು ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ಹಲವಾರು ಟ್ರಕ್‌ಗಳನ್ನು ಆವರಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಟ್ರಕ್‌ಗಳ ಸಂಖ್ಯೆ ಸ್ಪಷ್ಟವಾಗಿಲ್ಲ. ಸುಟ್ಟಗಾಯಗಳಿಂದ ಬಳಲುತ್ತಿರುವ ಕೆಲವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಕೆಲವು ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಪಘಾತಕ್ಕೀಡಾದ ಟ್ರಕ್‌ಗಳಲ್ಲಿ ರಾಸಾಯನಿಕ ಅನಿಲ ಇದ್ದ ಕಾರಣ ಕಾರಣ ಅಪಘಾತವಾದ ಕೂಡಲೇ ಬೆಂಕಿಹತ್ತಿಕೊಂಡು ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಮತ್ತಿತರ ವಾಹನಗಳಿಗೆ ವ್ಯಾಪಿಸಿದೆ.