ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

ರಾಹುಲ್‌ ಗಾಂಧಿಯನ್ನು ಡ್ರಗ್‌ ಅಡಿಕ್ಟ್‌ ಎಂದಾಗ ಕೋಪ ಬಂತು ಎಂದ ಸಚಿವೆ

ಬೆಳಗಾವಿ: ರಾಹುಲ್ ಗಾಂಧಿಯವರನ್ನು ಸುಮ್ಮನೆ ಎಳೆದು ತಂದು ಡ್ರಗ್ ಅಡಿಕ್ಟ್ ಎಂದಿದ್ದಕ್ಕೆ ನೀವು ಮೂವರನ್ನು ಆಕ್ಸಿಡೆಂಟ್ ಮಾಡಿ ಅವರ ಕೊಲೆಗೆ ಕಾರಣರಾಗಿದ್ದೀರಿ, ನೀವು ಕೊಲೆಗಡುಕ ಎಂದು ನಾನು ಹೇಳಿದ್ದು ನಿಜ. ನಾನು ಆ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಹೆಣ್ಣಿನ ಮಾನ, ಶೀಲದ ಬಗ್ಗೆ ಬಳಸಬಾರದ ಪದ ಬಳಸಿದ ಸಿ.ಟಿ ರವಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
ನಿನ್ನೆ ವಿಧಾನ ಪರಿಷತ್‌ನಲ್ಲಿ ನಡೆದ ಪ್ರತಿಭಟನೆ, ಅವಾಚ್ಯ ಶಬ್ದ ಬಳಕೆ, ನಿಂದನೆಯಿಂದ ಉಂಟಾದ ಜಗಳ ಹಾಗೂ ವಿವಾದಕ್ಕೆ ಸಂಬಂಧಪಟ್ಟಂತೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.

ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಗೃಹ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದರು. ಅದನ್ನ ನಾವು ನಿನ್ನೆ ಖಂಡಿಸಿ ಪ್ರತಿಭಟನೆ ನಡೆಸಿದೆವು. ಧರಣಿ ಮುಗಿಸಿ ಕುಳಿತಿದ್ದೆವು. ಆಗ ಸಿಟಿ ರವಿ ಅವರು ಇದ್ದಕ್ಕಿದ್ದಂತೆ ಬಂದು ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಎಂದರು, ಆಗ ನನಗೆ ಕೋಪ ಬಂದು, ತಾವು ಕೂಡ ಆಕ್ಸಿಡೆಂಟ್ ಮಾಡಿದ್ದೀರಿ ನೀವು ಕೊಲೆಗಾರರಾಗ್ತಿರಿ ಅಂದೆ. ಆಗ ಅವರು ನನಗೆ ಹೇಳಬಾರದ ಪದವನ್ನು ಒಂದು ಬಾರಿ ಅಲ್ಲ ಎರಡು ಬಾರಿ ಅಲ್ಲ ಮೂರ್ನಾಲ್ಕು ಬಾರಿ ಹೇಳಿದ್ದರು ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.































 
 

ನಾನು ಇದಕ್ಕೆಲ್ಲಾ ಹೆದರಲ್ಲ ಆದರೆ, ನಾನೊಬ್ಬ ಮಹಿಳೆ, ತಾಯಿ, ಸಹೋದರಿ, ಅತ್ತೆ ಆಗಿದ್ದೇನೆ. ನನಗೆ ಅಪಮಾನವಾಗಿದೆ. ಇಲ್ಲಿಯವರೆಗೂ ನಾನು ಒಂದು ಇರುವೆಗೂ ಕಾಟ ಕೊಟ್ಟವಳಲ್ಲ, ಕೆಟ್ಟವರನ್ನ ಕಂಡ್ರೆ ದೂರ ಇರೋಳು, ಆ ವೇದಿಕೆಯಲ್ಲಿ ಎಲ್ಲರೂ ಧೃತರಾಷ್ಟ್ರರಾದರು. ನಮ್ಮ ಪಕ್ಷದವರು ಮಾತ್ರ ನನ್ನ ಬೆನ್ನಿಗೆ ನಿಂತರು ಎಂದು ಹೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top