ವಿಟ್ಲ : ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭ ಡಿ.21ರಂದು ಬೆಳಗ್ಗೆ 10:15ಕ್ಕೆ ಮಂಗಳೂರು ‘ರಾಧಾಶ್ರೀ’ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿದೆ.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರ, ವಿಟ್ಲ ಅರಮನೆಯ ಬಂಗಾರ ಅರಸರು, ಸಂಘದ ಕಛೇರಿಯ ಉದ್ಘಾಟನೆ ಮಾಡಲಿದ್ದಾರೆ.
ಬೆಳ್ತಂಗಡಿ ಅರಿಕೋಡಿ ಶ್ರೀ ಚಾಮುಂಡಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಅರಿಕೋಡಿ ದೀಪ ಪ್ರಜ್ವಲಿಸಲಿದ್ದಾರೆ.
ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್ ಗಣಕಯಂತ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಥಮ ಠೇವಣಿ ಪತ್ರ ಹಸ್ತಾಂತರಿಸಲಿದ್ದಾರೆ.
ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅಧ್ಯಕ್ಷ ಮೋನಪ್ಪ ಗೌಡ, ಶಿವಾಜಿನಗರ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟ್ಟು, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ವಿಟ್ಲ ರಾಧಾಶ್ರೀ ವಾಣಿಜ್ಯ ಸಂಕೀರ್ಣದ ಮಾಲಕ ಎನ್.ಎನ್. ಭಟ್ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಗಿರಿಯಪ್ಪ ಗೌಡ ಶಾಂತಿಲ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ. ಕುಶಾಲಪ್ಪ ಗೌಡ ಇರಂದೂರು, ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉಪಾಧ್ಯಕ್ಷ ಮಹಾಬಲ ಗೌಡ ಅಡ್ಡಾಳಿ, ಮಹಿಳಾ ಘಟಕದ ಬಂಟ್ವಾಳ ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷೆ ಅಮಿತಾ ಕೃಷ್ಣ ಕೆ.ಜಿ., ಬಂಟ್ವಾಳ ಗೌಡರ ಯಾನೆ ಒಕ್ಕಲಿಗರ ಸಂಘ ಯುವ ವೇದಿಕೆಯ ಅಧ್ಯಕ್ಷ ದಿನೇಶ್ ಗೌಡ, ಮಾಡ್ತೇಲು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಕೆ. ಮೋನಪ್ಪ ಗೌಡ ಶಿವಾಜಿನಗರ, ಉಪಾಧ್ಯಕ್ಷ ಮಹಾಬಲ ಗೌಡ ಅಡ್ಡಾಳಿ, ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೌತಮ್ ಎಸ್.ಕೆ. ತಿಳಿಸಿದ್ದಾರೆ.