ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಮತ್ತು 29 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಆಮಂತ್ರಣವನ್ನು ರೋಟರಿ ಕ್ಲಬ್ ಗೆ ವಿತರಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈಯವರು ರೋಟರಿ ಕ್ಲಬ್ ಪುತ್ತೂರು ಪೂರ್ವದ ಕುಟುಂಬ ಸಮ್ಮಿಲನದಲ್ಲಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರು ಮತ್ತು ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷ ಡಾ.ರವಿಪ್ರಕಾಶ್ ಅವರಿಗೆ ಆಮಂತ್ರಣ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪುತ್ತೂರಿನ ಎಲ್ಲಾ ರೋಟರಿಕ್ಲಬ್ ಪದಾಧಿಕಾರಿಗಳು ಭಾಗವಹಿಸಿದ್ದರು. ಎಲ್ಲರಿಗೂ ಆಮಂತ್ರಣ ನೀಡಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಸ್ವಾಗತಿಸಿದರು.