ಚೆನ್ನೈ: ಕೊಯಮತ್ತೂರು ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಿಕ್ಷೆ ಅನುಭವಿಸುತ್ತಿರುವ ಅಲ್- ಉಮ್ಮಾ ಸಂಸ್ಥಾಪಕ ಬಾಷಾ ಅವರ ಅಂತ್ಯಕ್ರಿಯೆಗೆ ಡಿಎಂಕೆ ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ , ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ .
ಕೊಯಮತ್ತೂರು ಬಾಂಬ್ ಸ್ಪೋಟ ಪ್ರಕರಣದ ದಾಳಿಗೆ ಸಂಬಂಧಿಸಿದ ಆರೋಪಿಗಳನ್ನು ಡಿಎಂಕೆ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ, ಈ ವಿಚಾರವಾಗಿ ಬಿಜೆಪಿ ಪಕ್ಷದ ಸದಸ್ಯರ ಆಕ್ರೋಶಕ್ಕೆ ಗುರಿಯಾಗಿದೆ.
ಬಂಧನಕ್ಕೆ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾಮಲೈ, “ಇದು 1998 ರಲ್ಲಿ ವಿನಾಶಕಾರಿ ದಾಳಿಯನ್ನು ಅನುಭವಿಸಿದ ಶಾಂತಿ-ಪ್ರೀತಿಯ ನಗರವಾಗಿದೆ. ಭಯೋತ್ಪಾದಕನನ್ನು ವೈಭವೀಕರಿಸುವುದು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.